Publish Date: Mon, 02 Mar 2020 (08:57 IST)
Updated Date: Mon, 02 Mar 2020 (08:59 IST)
ಚಿಕ್ಕಮಗಳೂರು : ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ ಆಪ್ತ ಕಾರಿನಲ್ಲಿ ಆನೆ ದಂತ ಸಾಗಿಸುವಾಗ ಸಿಕ್ಕಿಬಿದ್ದ ಹಿನ್ನಲೆಯಲ್ಲಿ ಆತನ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ ಸ್ಫೋಟಕ ವಸ್ತುಗಳು ದೊರಕಿವೆ.
ಕಾರಿನಲ್ಲಿ ಆನೆ ದಂತ ಸಾಗಿಸುವಾಗ ಸಿಕ್ಕಿಬಿದ್ದಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಐಟಿ ಸೇಲ್ ಮುಖ್ಯಸ್ಥನಾಗಿರುವ ಶಬರೀಶ್ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ವೇಳೆ ಅಲ್ಲಿ ಅವರಿಗೆ ನಕ್ಷತ್ರ ಆಮೆ, ಕಲ್ಲು ಆನೆ, ಗನ್, ಪಿಸ್ತೂಲ್, ಬುಲೆಟ್, ಗಂಧದ ತುಂಡುಗಳು ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.
ಈ ವಸ್ತುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು ಮನೆಯಲ್ಲಿದ್ದ ಶಬರೀಶ್ ನ ತಂದೆ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಶಬರೀಶ್ ನ ಮನೆಯಲ್ಲಿ ಸ್ಫೋಟಕ ವಸ್ತುಗಳು ದೊರೆತ ಹಿನ್ನಲೆಯಲ್ಲಿ ಪೊಲೀಸರಿಗೆ ಈತನ ಮೇಲೆ ಹಲವು ಅನುಮಾನಗಳು ವ್ಯಕ್ತವಾಗಿದೆ.