Webdunia - Bharat's app for daily news and videos

Install App

ಭೂ ಮಂಜೂರಾತಿ ಅರ್ಜಿ ಕಾಲ ವಿಸ್ತರಣೆ: ಸಚಿವ ಆರ್.ಅಶೋಕ್

Webdunia
ಶುಕ್ರವಾರ, 18 ಫೆಬ್ರವರಿ 2022 (19:59 IST)
ಬೆಂಗಳೂರು: ಸರಕಾರಿ ಭೂಮಿ ಮಂಜೂರಾತಿಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆ ಮಾಡುವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಹೊಬಳಿ ಶಾಂತಗ್ರಾಮದ ಭೂ ಅಕ್ರಮಗಳನ್ನು ಭ್ರಷ್ಟಾಚಾರ ನಿಗ್ರಹ ದಳದಿಂದ ತನಿಖೆ ನಡೆಸುವ ಮಹತ್ವದ ನಿರ್ಣಯಗಳನ್ನು ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದರು.
ಬುಧವಾರ ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಪಕ್ಷಗಳ ಧರಣಿಯ ನಡುವೆಯೇ ಸಭಾಪತಿ ಅವರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು.
ಆಡಳಿತ ಪಕ್ಷದ ಸದಸ್ಯ ಹಣುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಅವರು, ದರ್ಕಾಸ್ತು ಸರಕಾರಿ ಭೂಮಿ ಮಂಜೂರಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಒಂದು ವರ್ಷಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಹೋಬಳಿ ಶಾಂತನಪುರ ಗ್ರಾಮದ ಸರ್ವೇಸಂಖ್ಯೆ 9 ರಲ್ಲಿ ದಲಿತರಿಗೆ ಮಂಜೂರಾಗಿದ್ದ 240 ಎಕರೆಯನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿ ಅಕ್ರಮ ಎಸಗಲಾಗಿದೆ. ಶಾಸಕರ ಮನವಿಯ ಮೇರೆಗೆ ಪ್ರಕರಣವನ್ನು ಎಸಿಬಿ ತನಿಖೆಗೆ ಒಪ್ಪಿಸಲಾಗುತ್ತದೆ ಎಂದು ಸದಸ್ಯ ರಘುನಾಥ್‍ರಾವ್ ಮಲ್ಕಾಪೂರೆ ಅವರ ಪ್ರಶ್ನೆಗೆ ಉತ್ತರಿಸಿದರು.
ಸದಸ್ಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಅಶೋಕ್, ರಾಜ್ಯದಲ್ಲಿ 31 ಕಂದಾಯ ಜಿಲ್ಲೆಗಳು ಹಾಗೂ 53 ಉಪವಿಭಾಗಗಳಿವೆ. ಕಂದಾಯ ಇಲಾಖೆಗೆ 22 ಸಾವಿರ 33 ಹುದ್ದೆಗಳು ಮಂಜೂರಾಗಿದ್ದು, 16 ಸಾವಿರದ 355 ಮಂದಿ ಕೆಲಸ ಮಾಡುತ್ತಿದ್ದಾರೆ. 5 ಸಾವಿರದ 678 ಹುದ್ದೆಗಳು ಖಾಲಿ ಇವೆ. ಎಸ್ ಡಿ ಎ ಮತ್ತು ಗ್ರಾಮ ಲೆಕ್ಕಿಗರನ್ನು ನೇಮಿಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ಸದಸ್ಯ ಅರುಣ್ ಅವರು ವಸತಿ ಯೋಜನೆಗಳ ಫಲಾನುಭವಿಗಳಿಗೆ ಹಂಚಿಕೆಯಾದ ಮನೆಗಳ ಜಿಪಿಎಸ್ ಅಳವಡಿಕೆಯಲ್ಲಿ ತಾಂತ್ರಿಕ ತೊಂದರೆಯಾಗುತ್ತಿರುವುದನ್ನು ಪ್ರಸ್ತಾಪಿಸಿದರು.
ಸುಮಾರು ವರ್ಷಗಳ ಹಿಂದೆ ನಿರ್ಮಿಸಿರುವ ಹಳೆ ಮನೆಗಳನ್ನು ಜಿಪಿಎಸ್ ಅಳವಡಿಸಿರುವ ಕಾರಣ ಅಂತಹ ಮನೆಗಳನ್ನು ಹಂತವಾರು ಫೋಟೋ ಇರದ ಮನೆಗಳೆಂದು ಪರಿಗಣಿಸಿ ತಾತ್ಕಾಲಿಕವಾಗಿ ಅನುದಾವನ್ನು ತಡೆ ಹಿಡಿಯಲಾಗಿದೆ. ರಾಜ್ಯದಲ್ಲಿ ಇಂತಹ 37 ಸಾವಿರದ 252 ಮನೆಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಗದ್ದಲದ ನಡುವೆ ಸಚಿವರು ಸದಸ್ಯರು ಕೇಳಿದ ಪ್ರಶ್ನೆಗೆ ಬದಲಿ ಉತ್ತರ ನೀಡಿದರು. ಕಾಂಗ್ರೆಸ್ ಸದಸ್ಯರು ಧರಣಿ ನಡೆಸುತ್ತಿದ್ದರಿಂದ ಪ್ರಶ್ನೋತ್ತರದಿಂದ ದೂರ ಉಳಿದು, ಸಚಿವ ಈಶ್ವರಪ್ಪ ವಿರುದ್ಧ ಘೋಷಣೆ ಕೂಗಲಾರಂಭಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments