ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳು ಸಾಲದಲ್ಲಿ ಸಿಲುಕಿದ್ದವು.
ಉದ್ದಿಮೆಗಳ ಅನುಕೂಲಕ್ಕಾಗಿ ಜಾರಿಗೊಳಿಸಿದ್ದ ಎಲ್ಲ ಸಾಲಖಾತ್ರಿ ಯೋಜನೆಗಳನ್ನು ಇನ್ನೂ ಒಂದು ಆರ್ಥಿಕ ವರ್ಷದವರೆಗೆ ವಿಸ್ತರಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದ್ದಾರೆ.
ಒಂದು ಲಕ್ಷಕ್ಕೂ ಹೆಚ್ಚು ಸಣ್ಣ ಉದ್ದಿಮೆಗಳಿಗೆ ಸಾಲದ ಬೆಂಬಲ ಒದಗಿಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.