Publish Date: Sun, 30 Oct 2022 (08:48 IST)
Updated Date: Sun, 30 Oct 2022 (08:41 IST)
ಬೆಂಗಳೂರು : ಆಧುನಿಕ ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಲ್ಲೇಶ್ವರಂ ಮಾದರಿಯನ್ನು ಅನುಸರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಇರುವ ಸರ್ಕಾರ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಮಲ್ಲೇಶ್ವರಂ ಸ್ಕೂಲ್ ಮಾಡೆಲ್ ಹಾಗೂ ಪುನೀತ್ ಸ್ಯಾಟ್ಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿ ಮಾತನಾಡಿದರು.
ಮಲ್ಲೇಶ್ವರಂ ಮಾದರಿ ಶಾಲೆಯಲ್ಲಿ ಮಕ್ಕಳೇ ತಯಾರಿಸಿರುವ ಸ್ಯಾಟ್ಲೈಟ್ ಇಂದು ಅನಾವರಣವಾಗಿದೆ. ಪುನೀತ್ ರಾಜ್ಕುಮಾರ್ ಅವರ ಹೆಸರಿನಲ್ಲಿ ಆಗಿದ್ದು, ಬಹಳ ಯೋಗ್ಯ ವ್ಯಕ್ತಿಯ ಹೆಸರಿನಲ್ಲಿ ಕೆಲಸವಾಗುತ್ತಿದೆ ಎಂದರು.