ಆಗಷ್ಟ್ 2 ರಂದು ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್ ಕರೆ ನೀಡಲಾಗಿದೆ. ಈ ಬಂದ್ ಗೆ 30ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲವಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಬಂದ್ ಕರೆ ನೀಡಲಾಗಿದೆ. ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ರೈತ ಸಂಘ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಸುದ್ದಿಗೋಷ್ಠಿ ನಡೆಸಿದ್ದು, ಪ್ರತಿಯೊಂದು ಹಂತದಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ.
ನೀವೂ ಉತ್ತರ ಕರ್ನಾಟಕಕ್ಕೆ ಯಾವುದೇ ಅಭಿವೃದ್ಧಿ ಮಾಡುವುದು ಬೇಕಾಗಿಲ್ಲ. ಕುಮಾರಸ್ವಾಮಿ ಕಾವೇರಿ ನದಿಗೆ ಬಾಗಿನ ಅರ್ಪಿಸುತ್ತಾರೆ. ಅದೇ ಸಿಎಂ ಕುಮಾರಸ್ವಾಮಿ ಅವರು ಕೃಷ್ಣಾ ಭರ್ತಿಯಾದರು ಬಾಗಿನ ಅರ್ಪಿಸಲು ಬಂದ್ರೆ ಬಹಿಷ್ಕಾರ ಹಾಕ್ತಿವಿ ಎಂದು ಎಚ್ಚರಿಸಿದರು.
ಸಿಎಂ ಬಾಗಿನ ಅರ್ಪಿಸಲು ಬಂದ್ರೆ ಕಪ್ಪು ಬಟ್ಟೆ ಪ್ರದರ್ಶನ ಮಾಡ್ತಿವಿ. ಕುಮಾರಸ್ವಾಮಿ ದಕ್ಷಿಣ ಕರ್ನಾಟಕ ಮುಖ್ಯಮಂತ್ರಿ.
ಹೀಗಾಗಿ ಸಿಎಂ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಲು ಆಗ್ರಹ ಮಾಡುತ್ತೇವೆ ಎಂದು ಹೇಳಿದರು.