Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

DK Shivakumar eye donation

Sampriya

ಬೆಂಗಳೂರು , ಗುರುವಾರ, 19 ಜೂನ್ 2025 (19:10 IST)
Photo Credit X
ಬೆಂಗಳೂರು: ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೇತ್ರದಾನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇತ್ರದಾನ ಮಾಡಿದರು.

ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನಾನು ಕೂಡ ನನ್ನ ನೇತ್ರ ದಾನ ಮಾಡಿದ್ದೇನೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶ್ರೀ ಮಂಜುನಾಥ್ ಭಂಡಾರಿ,  ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಹೆಚ್ ಎಸ್ ಮಂಜುನಾಥ್, ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌