Publish Date: Sat, 31 Jan 2026 (11:14 IST)
Updated Date: Sat, 31 Jan 2026 (11:17 IST)
ಬೆಂಗಳೂರು: ಕರ್ನಾಟಕದಲ್ಲಿ ಇನ್ನು ಮುಂದೆ ಇನ್ ಸ್ಟಾಗ್ರಾಂ, ಫೇಸ್ ಬುಕ್ ನಂತಹ ಸೋಷಿಯಲ್ ಮೀಡಿಯಾ ಆಪ್ ಗಳ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಯಾರಿಗೆ ಈ ನಿಷೇಧ ಇಲ್ಲಿದೆ ಶಾಕಿಂಗ್ ವರದಿ.
ವಿದೇಶಗಳಲ್ಲಿರುವಂತೆ ರಾಜ್ಯದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಇನ್ ಸ್ಟಾಗ್ರಾಂ, ಫೇಸ್ ಬುಕ್ ಸೇರಿದಂತೆ ಪ್ರಮುಖ ಸೋಷಿಯಲ್ ಮೀಡಿಯಾ ಆಪ್ ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ನಿನ್ನೆ ಸದನದಲ್ಲಿ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಾ ಈ ಬಗ್ಗೆ ಮಾತನಾಡಿದ್ದಾರೆ.
ಸಾಮಾಜಿಕ ಜಾಲಾತಣಗಳಿಂದ ಮಕ್ಕಳು ಹಾಳಾಗುತ್ತಿರುವ ಬಗ್ಗೆ ಬಿಜೆಪಿ ಹಿರಿಯ ಸದಸ್ಯ ಸುರೇಶ್ ಕುಮಾರ್ ಸದನದ ಗಮನ ಸೆಳೆದಿದ್ದಾರೆ. ಇದಕ್ಕೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಇದು ಗಂಭೀರ ವಿಷಯ. ಇದಕ್ಕೆ ನನ್ನ ಸಹಮತವೂ ಇದೆ. ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದಿದ್ದಾರೆ.
ಫಿನ್ ಲ್ಯಾಂಡ್, ಆಸ್ಟ್ರೇಲಿಯಾದಲ್ಲಿ ಈಗಾಗಲೇ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧಿಸಲಾಗಿದೆ. ಬ್ರಿಟನ್ ನಲ್ಲೂ ನಿಷೇಧಕ್ಕೆ ಚಿಂತನೆ ನಡೆಸಲಾಗುತ್ತಿದೆ. ನಾವೂ ಸಾಮಾಜಿಕ ಜಾಲತಾಣಗಳ ಜವಾಬ್ಧಾರಿಯುತ ಬಳಕೆಗೆ ಡಿಟಾಕ್ಸಿಫಿಕೇಷನ್ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ ಎಂದಿದ್ದಾರೆ.