Publish Date: Wed, 13 Jun 2018 (10:06 IST)
Updated Date: Wed, 13 Jun 2018 (10:08 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಟ್ರೋಲ್ ಗೆ ತುತ್ತಾಗಿದ್ದು, ಅವರ ಅಭಿಮಾನಿಗಳ ಸಂಘದ ಕಾರ್ಯಕರ್ತರು ದೂರು ನೀಡಿದ್ದಾರೆ.
ಸಿಎಂ ಕುಮಾರಸ್ವಾಮಿ ಫೋಟೋ ಎಡಿಟ್ ಮಾಡಿ ದರ್ಶನ್ ಹೆಸರಿನ ನಕಲಿ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿತ್ತು.
ದರ್ಶನ್ ಹೆಸರು ಹೇಳಿಕೊಂಡು ಈ ರೀತಿ ಕುಮಾರಸ್ವಾಮಿ ವಿರುದ್ಧ ಅವಹೇಳನ ಮಾಡಿದ ಕಿಡಿಗೇಡಿಗಳ ವಿರುದ್ಧ ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.