Publish Date: Thu, 30 Nov 2023 (16:00 IST)
Updated Date: Thu, 30 Nov 2023 (17:39 IST)
ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ನಕಲಿ ಡಾಕ್ಟರನ್ನು ಬಂಧಿಸಲಾಗಿದೆ. 50 ವರ್ಷದ ಮಹಮ್ಮದ್ ರಫಿ ಎಂಬ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ಹಾಗೂ ಪೊಲೀಸರು ದಾಳಿ ನಡೆಸಿ ನಕಲಿ ವೈದ್ಯನನ್ನು ಬಂಧಿಸಲಾಗಿದೆ.
ಆರೋಪಿ ಮಹಮ್ಮದ್ ರಫಿ ಶಿವಪುರದ ಮನೆಯಲ್ಲೇ ಕ್ಲಿನಿಕ್ ನಡೆಸ್ತಿದ್ದ. ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿ, ತಪಾಸಣೆ ನಡೆಸಲಾಗಿದೆ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.