ಜಿಲ್ಲಾಧಿಕಾರಿಯೊಬ್ಬರ ಹೆಸರಿನಲ್ಲಿ ನಕಲಿ ಇ ಮೇಲ್ ಐಡಿ ಸೃಷ್ಟಿಸಿ ಮೇಲ್ ಗಳನ್ನು ಕಳಿಸಿರುವ ಘಟನೆ ನಡೆದಿದೆ.
ರಾಮನಗರ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಐಡಿಯಿಂದ ಇ-ಮೇಲ್ ಕಳುಹಿಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಎಚ್ಚರಿಸಿದ್ದಾರೆ.
ಜಿಲ್ಲಾಧಿಕಾರಿ ಅವರ ಹೆಸರಿನಲ್ಲಿ <
[email protected]> ನಕಲಿ ಇಮೇಲ್ ಖಾತೆ ತೆರೆದು ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳಿಗೆ ತಪ್ಪು ಸಂದೇಶ ಬರುವಂತಹ ಇ-ಮೇಲ್ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೇಲ್ ಕಳಿಸಿದವರ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
ಅಧಿಕೃತ ಐಡಿ: ರಾಮನಗರ ಜಿಲ್ಲಾಧಿಕಾರಿಯವರ ಅಧಿಕೃತ ಐಡಿ <
[email protected]> ನಿಂದ ಇ-ಮೇಲ್ ಕಳಿಸಲಾಗುತ್ತದೆ. ಸದರಿ ಐಡಿಯಿಂದ ಬರುವ ಸಂದೇಶಗಳನ್ನು ಹೊರತುಪಡಿಸಿ ಇನ್ನಾವುದೇ ಐಡಿಗಳಿಂದ ಬರುವ ಬರುವಂತಹ ಸಂದೇಶ, ಮಾಹಿತಿಗಳನ್ನು ಪರಿಗಣಿಸಬಾರದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.