Publish Date: Mon, 04 Sep 2023 (17:34 IST)
Updated Date: Mon, 04 Sep 2023 (16:42 IST)
ಸರ್ಕಾರಿ ಅಧಿಕಾರಿಗಳು, ಪೊಲೀಸರು, ಪ್ರಭಾವಿಗಳ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡುವುದು, ಸುಳ್ಳು ಸುದ್ದಿ ಹಬ್ಬಿಸುವಂತಹ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗಿವೆ ಆದರೆ ಇಲ್ಲಿ ಕೆಲ ಸೈಬರ್ ಚೋರರು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರು ಬಳಸಿಕೊಂಡು ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಫೋಟೋ, ಹೆಸರು ಬಳಸಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ. ಸದ್ಯ ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ದಾಖಲಿಸಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.