Publish Date: Mon, 25 Jul 2022 (20:19 IST)
Updated Date: Mon, 25 Jul 2022 (20:22 IST)
ಮೈಸೂರಿನ ಹೊರವಲಯದ ಮಂಡಕಳ್ಳಿ ಗ್ರಾಮದಲ್ಲಿ ನಕಲಿ ಗೊಬ್ಬರ ತಯಾರಿಕಾ ಘಟಕದ ಮೇಲೆ ದಾಳಿ ನಡೆದಿದೆ. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಮಧುಲತಾ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ನಕಲಿ ರಸಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಸ್ಥಳದಲ್ಲಿ ಜೇಡಿಮಣ್ಣಿನ ಚೀಲಗಳು ಯಂತ್ರೋಪಕರಣಗಳು ಸೇರಿದಂತೆ ಹಲವು ಪರಿಕರಗಳು ಪತ್ತೆಯಾಗಿವೆ. ಆರೋಪಿಗಳು ಮಹೇಶ್ ಎಂಬುವವರಿಗೆ ಸೇರಿದ ಕೋಳಿ ಫಾರಂನಲ್ಲಿ ನಕಲಿ ಗೊಬ್ಬರ ತಯಾರಿಕೆ ದಂಧೆ ನಡೆಸುತ್ತಿದ್ದರು. ಸದ್ಯ ಈ ಬಗ್ಗೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.