ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಪತ್ತೆ ಹಚ್ಚಿ ಆರೋಪಿಗಳ ಹೆಡೆಮುರಿ ಕಟ್ಟಿದ್ದ ಜಯನಗರ ಪೊಲೀಸರು ಇದೀಗ ಅಂಕಪಟ್ಟಿಯ ಅಸಲಿತನದ ಬಗ್ಗೆ 10 ವಿಶ್ವವಿದ್ಯಾಲಯಗಳಿಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.
ಐದಾರು ವರ್ಷಗಳಿಂದ ನಕಲಿ ಮಾರ್ಕ್ಸ್ ಕಾರ್ಡ್ ಜಾಲದಲ್ಲಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ, ನರೇಶ್, ದಿಲೀಪ್ ಹಾಗೂ ರಘು ಎಂಬುವವರನ್ನು ಬಂಧಿಸಿ 150 ನಕಲಿ ಮಾರ್ಕ್ಸ್ ಕಾರ್ಡ್ ಜಪ್ತಿ ಮಾಡಿಕೊಳ್ಳುವಲ್ಲಿ ಜಯನಗರ ಇನ್ ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಯಶಸ್ವಿಯಾಗಿದೆ. ಮಾರ್ಕ್ಸ್ ಕಾರ್ಡ್ ಮುಟ್ಟುಗೋಲು ಹಾಕಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಆಯಾ ಕಾಲೇಜುಗಳಿಗೆ ಮಾರ್ಕ್ಸ್ ಕಾರ್ಡ್ ನೈಜತೆ ಬಗ್ಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಪತ್ತೆ ಹಚ್ಚಿ ಆರೋಪಿಗಳ ಹೆಡೆಮುರಿ ಕಟ್ಟಿದ್ದ ಜಯನಗರ ಪೊಲೀಸರು ಇದೀಗ ಅಂಕಪಟ್ಟಿಯ ಅಸಲಿತನದ ಬಗ್ಗೆ 10 ವಿಶ್ವವಿದ್ಯಾಲಯಗಳಿಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.
ಐದಾರು ವರ್ಷಗಳಿಂದ ನಕಲಿ ಮಾರ್ಕ್ಸ್ ಕಾರ್ಡ್ ಜಾಲದಲ್ಲಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ, ನರೇಶ್, ದಿಲೀಪ್ ಹಾಗೂ ರಘು ಎಂಬುವರನ್ನು ಬಂಧಿಸಿ 150 ನಕಲಿ ಮಾರ್ಕ್ಸ್ ಕಾರ್ಡ್ ಜಪ್ತಿ ಮಾಡಿಕೊಳ್ಳುವಲ್ಲಿ ಜಯನಗರ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಯಶಸ್ವಿ ಯಾಗಿದೆ. ಮಾರ್ಕ್ಸ್ ಕಾರ್ಡ್ ಮುಟ್ಟುಗೋಲು ಹಾಕಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಆಯಾ ಕಾಲೇಜುಗಳಿಗೆ ಮಾರ್ಕ್ಸ್ ಕಾರ್ಡ್ ನೈಜತೆ ಬಗ್ಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.