Daily Horoscope
✕

ಸಿಲಿಕಾನ್ ಸಿಟಿಯಲ್ಲಿ ನಕಲಿ ಮಾರ್ಕ್ಸ್ ಕಾರ್ಡ್

Webdunia
ಸೋಮವಾರ, 29 ನವೆಂಬರ್ 2021 (15:50 IST)
ಸಿಲಿಕಾನ್ ಸಿಟಿಯಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಗಳ ದಂಧೆ ಜೋರಾಗಿ ನಡೀತಾ ಇದೆ. ಕಾಲೇಜು ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡ್ತಿರೋ ಆ ಖತರ್ನಾಕ್ ಗ್ಯಾಂಗ್ ಲಕ್ಷ ಲಕ್ಷ ಹಣ ಲೂಟಿ ಮಾಡ್ತಾ ಇದೆ.. ಕೇವಲ ಐವತ್ತು ಸಾವಿರ ಕೊಟ್ರೆ ಸಾಕು ನಿಮಗೆ ಬಿಕಾಂ, ಡಿಗ್ರಿ ಮಾರ್ಕ್ಸ್ ಕಾರ್ಡ್ ಕೊಡ್ತಾರೆ ಅಂದರೆ.ಯೋಚನೆ ಮಾಡಿ. ಈ ದಂಧೆ ಎಷ್ಟರಮಟ್ಟಿಗೆ ನಡೀತಾ ಇದೆ ಅಂತ. ಹೌದು ಅಂತಹ ನಕಲಿ ಗ್ಯಾಂಗ್ ವೊಂದನ್ನ ಪೊಲೀಸರು ಎಡೆಮುರಿಕಟ್ಟಿದ್ದಾರೆ.
 
ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ನಕಲಿ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡ್ತಿದ್ದ ನಾಲ್ವರು ಅರೋಪಿಗಳನ್ನು ಬಂಧಿಸಿದ್ದಾರೆ.
 
ಬೆಂಗಳೂರು ಮೂಲದ ರಾಕೇಶ್, ಕೃಷ್ಣ ಹಾಗೂ ತನ್ಮಯ್ ಬಂಧಿತ ಆರೋಪಿಗಳಾಗಿದ್ದು, ಹೆಬ್ಬಾಳದ ಕೆಂಪಾಪುರ ಬಳಿ ಡ್ರೀಮ್ ಎಜುಕೇಶನ್ ಸರ್ವಿಸ್ ಹೆಸರಲ್ಲಿ ಕಚೇರಿ ತೆರೆದು ಪ್ರತಿಷ್ಠಿತ ಶಾಲಾ ಕಾಲೇಜುಗಳ ಸೀಲ್ ಗಳನ್ನು ನಕಲು ಮಾಡಿ 50 ಸಾವಿರಕ್ಕೆ ಬಿಕಾಂ, ಡಿಗ್ರಿ ಸರ್ಟಿಫಿಕೇಟ್ ಗಳನ್ನು ನಕಲು ಮಾಡಿ ಮಾರಾಟ ಮಾಡುತ್ತಿದ್ದರು.
 
ಜೊತೆಗೆ ಒಂದೊಂದು ಡಿಗ್ರಿ ಸರ್ಟಿಫಿಕೇಟ್ ಗೂ ಒಂದೊಂದು ರೇಟ್ ಫಿಕ್ಸ್ ಮಾಡ್ತಿದ್ದ ಈ ಖದೀಮರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ಬಂದಿರುತ್ತೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಇಷ್ಟು ಜನರನ್ನ ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments