Webdunia - Bharat's app for daily news and videos

Install App

ಒಕ್ಕಲಿಗರೇ ಆಗಿರುವ ಲಕ್ಷ್ಮಣ್ ವಿರುದ್ಧ ಅಪಪ್ರಚಾರ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯವ ವಾಗ್ದಾಳಿ

Sampriya
ಬುಧವಾರ, 3 ಏಪ್ರಿಲ್ 2024 (17:42 IST)
Photo Courtesy X
ಮೈಸೂರು: ಈ ಬಾರಿಯ ಲೋಕಸಭಾ  ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಬಿಜೆಪಿ ಮಾಡಿದ ದ್ರೋಹಕ್ಕೆ ತಕ್ಕ ಪಾಠ ಕಲಿಸಬೇಕೆಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಜನರಿಗೆ ಬದುಕು ಮುಖ್ಯ. ಬೆಲೆ ಏರಿಕೆ ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು  ಭಾಗ್ಯಗಳ ಕಾರ್ಯಕ್ರಮ ಜಾರಿ ಮಾಡಿದೆವು. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ಫಲಾನುಭವಿ ಕುಟುಂಬಗಳಿಗೆ ತಿಂಗಳಿಗೆ 4-5 ಸಾವಿರ ಉಳಿತಾಯ ಆಗುತ್ತಿದೆ. ಇದರಿಂದ ಜನರ ಸಂಕಷ್ಟ ದೂರವಾಗಿದೆ ಎಂದರು.  

ಸೋಲಿನ ಭಯದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಲಕ್ಷ್ಮಣ್ ಒಕ್ಕಲಿಗರೇ ಅಲ್ಲ ಎನ್ನುವ ಸುಳ್ಳು ಹರಡಿಸಿದ್ದಾರೆ.  ಎಂ.ಲಕ್ಷ್ಮಣ್ ಅವರು ಒಕ್ಕಲಿಗರಾಗಿ ಹುಟ್ಟಿ ವಿಶ್ವ ಮಾನವರಾಗುವ ಹಾದಿಯಲ್ಲಿ ನಡೆಯುತ್ತಾ ಕುವೆಂಪು ಆಶಯವನ್ನು ಪಾಲಿಸುತ್ತಿದ್ದಾರೆ ಎಂದರು.

ಅಮಿತ್ ಶಾ ಚುನಾವಣಾ ಪ್ರಚಾರಕ್ಕೆ ಬಂದು ಸುಳ್ಳಿನ ಮೇಲೆ ಸುಳ್ಳುಗಳನ್ನು ಹೇಳುತ್ತಿದ್ದಾರೆ.  ಕೇಂದ್ರ ತಂಡವೇ ಬರಗಾಲದ ವರದಿ ನೀಡಿ ಐದು ತಿಂಗಳಾಯಿತು. ಇವತ್ತಿನವರೆಗೂ ಕನ್ನಡಿಗರ ಪಾಲಿನ ಒಂದೇ ಒಂದು  ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. ನೀವು ಹೇಳಿದ ಸುಳ್ಳನ್ನು ಸತ್ಯ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೀನಿ. ಇಲ್ಲದಿದ್ದರೆ ನೀವೇನು ಮಾಡ್ತೀರಿ, ನಿರ್ಧರಿಸಿ ಎಂದು ಸವಾಲು ಹಾಕಿದರು.  

ಲಕ್ಷ್ಮಣ್‌ಗೆ ಭರ್ಜರಿ ಲೀಡ್ ಕೊಟ್ಟು ನನ್ನ ಶಕ್ತಿ ಹೆಚ್ಚಿಸಿ

ಇಲ್ಲಿ ಬಂದಿರುವ ನೀವುಗಳೇ ಲೋಕಸಭಾ ಅಭ್ಯರ್ಥಿಗಳು. ಇಲ್ಲಿ ಲಕ್ಷ್ಮಣ್ ಗೆದ್ದರೆ ನಾನು ಗೆದ್ದಂತೆ. ಕಾಂಗ್ರೆಸ್ ಗೆದ್ದರೆ ಸತ್ಯ ಗೆದ್ದಂತೆ. ಸವಲಾಗಿ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಶಿವಕುಮಾರ್, ಸಚಿವರಾದ ಕೆ. ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತು ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಉಪಸ್ಥಿತರಿದ್ದು ಕಾಂಗ್ರೆಸ್ ಗೆಲ್ಲಿಸಿ ದೇಶದ ಆರ್ಥಿಕತೆ ಉಳಿಸಿ, ಪ್ರಜಾತಂತ್ರವನ್ನು ರಕ್ಷಿಸುವಂತೆ ಕರೆ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments