ಚುನಾವಣೆ ಸಂದರ್ಭದಲ್ಲಿ ಸುಳ್ಳು ಅಫಿಡೆವಿಟ್ ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಹಕಾರ ಸಚಿವ ಎಚ್.ಎಸ್.ಮಹದೇವ್ ಪ್ರಸಾದ್ ಅವರಿಗೆ ಗುಂಡ್ಲುಪೇಟೆ ಜೆಎಂಎಫ್‌ಸಿ ಕೋರ್ಟ್ ಸಮನ್ಸ್ ಜಾರಿಯಾಗಿದೆ.
ವಿಚಾರಣೆಗೆಂದು ಡಿಸೆಂಬರ್ 21 ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಸಹಕಾರ ಸಚಿವರಿಗೆ ಸಮನ್ಸ್ ನೀಡಲಾಗಿದೆ.
ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಸಚಿವ ಮಹಾದೇವ್ ಪ್ರಸಾದ್ ಅವರು ಚುನಾವಣಾ ಅಯೋಗಕ್ಕೆ ಸಲ್ಲಿಸಿದ್ದ ಅಫಿಡೆವಿಟ್‌ನಲ್ಲಿ ಗುಂಡ್ಲುಪೇಟೆ ತಾಲೂಕಿನ ಅರೆಪುರ ಗ್ರಾಮದಲ್ಲಿ ಹೊಂದಿರುವ 3.22 ಎಕರೆ ಜಮೀನಿನ ವಿವರವನ್ನು ಘೋಷಿಸಿರಲಿಲ್ಲ ಎನ್ನುವ ಆರೋಪವಿದೆ.
ಈ ಕುರಿತು ಬಿಜೆಪಿ ನಾಯಕ ಸುರೇಶ್ ಅವರು 2013ರ ಸಾಲಿನ ನವೆಂಬರ್ ತಿಂಗಳಲ್ಲಿ ಪ್ರಕರಣ ದಾಖಲಿಸಿದ್ದರು. 2014 ರಲ್ಲಿ ಸ್ಥಳೀಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದಾಗ ಸಚಿವರು ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.
ಇದೀಗ ನ್ಯಾಯಾಲಯ ಎರಡನೆಯ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಸಚಿವ ಮಹಾದೇವ್ ಪ್ರಸಾದ್ ಅವರಿಗೆ ಖುದ್ದು ವಿಚಾರಣೆಗೆ ಹಾಚರಾಗುವಂತೆ ಸೂಚನೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ