ಬೆಂಗಳೂರು : ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮುರುಘಾ ಶ್ರೀಗಳ ವಿರುದ್ದ ಲೈಂಗಿಕ ಕಿರುಕುಳ ಆರೋಪ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಶ್ರೀಗಳ ವಿರುದ್ಧದ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ತನಿಖೆ ಆದ ಮೆಲೆ ಸತ್ಯಾಂಶ ಹೊರಬರುತ್ತೆ. ಶ್ರೀಗಳು ಆರೋಪ ಮುಕ್ತರಾಗಿ ಬರ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದರು.
ಇತ್ತ ಸಿಎಂ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ದೃಷ್ಟಿಯಿಂದ ಈ ಹಂತದಲ್ಲಿ ಮಾತಾಡೋದು ಸೂಕ್ತ ಅಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ, ಸತ್ಯ ಹೊರಗೆ ಬರುತ್ತದೆ. ಶ್ರೀಗಳ ವಿರುದ್ಧ ಪೋಕ್ಸೋ ಅಡಿ ಒಂದು ಕೇಸ್ ದಾಖಲಾಗಿದೆ.