Publish Date: Sun, 02 Jan 2022 (09:52 IST)
Updated Date: Sun, 02 Jan 2022 (09:53 IST)
ಬೆಳಗಾವಿ: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಬೆಳಗಾವಿಯ ಮೂಡಲಗಿ ತಾಲೂಕಿನಲ್ಲಿ ಕುಟುಂಬವೊಂದರ ಮೇಲೆ ಹಲ್ಲೆ ನಡೆಸಲಾಗಿದೆ.
ಡಿಸೆಂಬರ್ 29 ರಂದು ಘಟನೆ ನಡೆದಿತ್ತು. ಕುಟುಂಬಸ್ಥರು ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಯುವಕರ ಗುಂಪೊಂದು ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ.