Publish Date: Mon, 15 May 2023 (17:11 IST)
Updated Date: Mon, 15 May 2023 (16:03 IST)
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕಾಣಿ ಹಿಡಿದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.. ಇಬ್ಬರ ಬೆಂಬಲಿಗರು ತಮ್ಮ ನಾಯಕರ ಪರ ಬಿಗಿಪಟ್ಟು ಹಿಡಿದಿದ್ದಾರೆ. ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಬೆಂಗಳೂರಿನ ನೆಲಮಂಗಲದ ವಾದಕುಂಟೆ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಾದಕುಂಟೆ ಗ್ರಾಮದ ಶ್ರೀರಾಮ ಮಂದಿರದಲ್ಲಿ ಅಭಿಮಾನಿಗಳು ಸಾವಿರದ ಒಂದು ತೆಂಗಿನಕಾಯಿ ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.