Publish Date: Thu, 21 Jul 2016 (10:34 IST)
Updated Date: Thu, 21 Jul 2016 (10:37 IST)
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಇಂದು ರೈತ ಹುತಾತ್ಮ ದಿನಾಚರಣೆ ಆಚರಿಸಲಾಗುಲುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರೈತ ಹುತಾತ್ಮ ದಿನಾಚಾರಣೆಯಲ್ಲಿ ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟದ ಮುಂದಿನ ನಡೆ ಕುರಿತು ಚರ್ಚೆ ನಡೆಸಲಾಗುವುದು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವೇತನ ಹೆಚ್ಚಳವಾಗುತ್ತಿದೆ. ಆದರೆ, ರೈತರ ಆದಾಯ ಹೆಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಬ್ಬರಿ ಬೆಂಬಲ ಬೆಲೆಗೆ ಆಗ್ರಹಿಸಿ ಅಗಸ್ಟ್ 10 ರಂದು ವಿಧಾನಸೌಧವವರೆಗೂ ಪಾದಯಾತ್ರಿ ಕೈಗಾಳ್ಳಲಾಗುತ್ತಿದ್ದು, ಪಾದಯಾತ್ರೆಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ