ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ರೈತರ ಸಾಲಮನ್ನಾಗೊಳಿಸಿದೆ. ಆದರೂ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ.
									
			
			 
 			
 
 			
					
			        							
								
																	ಸಾಲಬಾಧೆಗೆ ಬೇಸತ್ತ ರೈತನೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಂಜಪ್ಪ ಬಿನ್ ಗುಂಡಶೆಟ್ಟಿ(48) ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ.
									
										
								
																	ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ ರೈತ ನಂಜಪ್ಪ, ಸಾಲಬಾಧೆ ಹೆಚ್ಚಾದ ಹಿನ್ನಲೆಯಲ್ಲಿ ತನ್ನ ಜಮೀನಿನಲ್ಲಿರುವ ಮರವೊಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
									
											
							                     
							
							
			        							
								
																	ಈ ಕುರಿತು ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.