Publish Date: Mon, 19 Nov 2018 (16:35 IST)
Updated Date: Mon, 19 Nov 2018 (16:37 IST)
ಕಬ್ಬಿನ ಬಾಕಿ ಬಿಲ್ ಹಣ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತರು, ಜಿಲ್ಲೆಯ 9 ಕಾರ್ಖಾನೆಗಳ ಪೈಕಿ 96 ಕೋಟಿ ಬಾಕಿ ಇದೆ. ಜಿಲ್ಲಾಧಿಕಾರಿಗಳ ವರದಿಯ ಪ್ರಕಾರ ಯಾವುದೇ ಹಣ ಬಾಕಿ ಇಲ್ಲ. ಕಾರ್ಖಾನೆಗಳ ಎಮ್.ಡಿ ಗಳಿಗೆ ಕೇಳಿದರೆ ಹಣ ಬಾಕಿ ಇದೆ ಎನ್ನುತ್ತಿದ್ದಾರೆ.
ಕಾರ್ಖಾನೆ ಮಾಲೀಕರು ಹಾಗೂ ಸರ್ಕಾರಿ ಅಧಿಕಾರಿಗಳು ಸೇರಿ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಒಂದು ವಾರದಲ್ಲಿ ಕಬ್ಬಿನ ಬಾಕಿ ಹಣ ಪಾವತಿಸಬೇಕು. ಇರದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗತ್ತೆ ಎಂದು ಎಚ್ಚರಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿದರು.
ಬೆಳಗಾವಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಗುಂಡಾಗಳು ಎಂದು ಸಿಎಂ ಹೇಳಿದ್ದಾರೆ. ಕೂಡಲೇ ಮುಖ್ಯಮಂತ್ರಿ ಕ್ಷಮೆ ಯಾಚಿಸಬೇಕು ಎಂದು ರೈತ ಮುಖಂಡರು ಆಗ್ರಹ ಮಾಡಿದರು.