Publish Date: Fri, 01 Sep 2017 (14:21 IST)
Updated Date: Fri, 01 Sep 2017 (14:26 IST)
ಸಾಲದ ಹೊರೆಯಿಂದಾಗಿ ಬೇಸತ್ತು ರೈತರು ಆತ್ಮಹತ್ಯೆಗೆ ಶರಣಾಗಬೇಡಿ. ಒಂದು ವರ್ಷದವರೆಗೆ ಕಾಯಿರಿ. ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕರೆ ನೀಡಿದ್ದಾರೆ.
ಮುಂದಿನ ವರ್ಷ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಅಧಿಕಾರಕ್ಕೆ ಬಂದ ನಂತರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದೆ. ಜೆಡಿಎಸ್ ಪಕ್ಷದಿಂದ ಮಾತ್ರ ರೈತರ ಅಭಿವೃದ್ಧಿ ಸಾಧ್ಯ ಎಂದು ಛಾಪಾಕಾಗದದ ಮೇಲೆ ಬರೆದುಕೊಡ್ತೇನೆ ಎಂದು ಸವಾಲ್ ಹಾಕಿದ್ದಾರೆ.
ಜೆಡಿಎಸ್ ಪಕ್ಷ ಬಿಟ್ಟು ಬೇರೆ ಯಾವ ಪಕ್ಷವೂ ರೈತರ ಉದ್ಧಾರ ಮಾಡೋಕೆ ಸಾಧ್ಯವಿಲ್ಲ. ಮೋಡವು ಬಿತ್ತನೆಯೇ ಇಲ್ಲ ಯಾರೋ ದುಡ್ಡು ಮಾಡಿ ಓಡಿ ಹೋಗುವ ಯೋಜನೆಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಮೋಡ ಬಿತ್ತನೆಯ ಬದಲು ಇಸ್ರೇಲ್ ತಂತ್ರಜ್ಞಾನದಂತೆ ಹನಿ ನೀರಾವರಿಗೆ ಆದ್ಯತೆ ನೀಡಿದ್ದಲ್ಲಿ ರೈತರ ಬದುಕು ಹಸನಾಗುತ್ತಿತ್ತು ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.