Webdunia - Bharat's app for daily news and videos

Install App

ಆನೆಗೆ ಖೆಡ್ಡಾ ತೋಡಿದ ರೈತರು

Webdunia
ಗುರುವಾರ, 29 ಡಿಸೆಂಬರ್ 2022 (16:10 IST)
ಹಾಸನದ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಜನರೇ ಕಾಡಾನೆಗಳ ಕಾಟಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೊಸಕೊಪ್ಪಲು‌ ಗ್ರಾಮದ ರೈತರು ಹಾಗೂ ಕಾಫಿ ಬೆಳೆಗಾರರು, 20 ಅಡಿ ಅಗಲ 20 ಅಡಿ ಆಳದ ಕಂದಕ ತೋಡಿದ್ದಾರೆ. ಕಂದಕ ತೋಡಿದರೆ ಆನೆ ದಾಳಿ ತಪ್ಪಿಸಬಹುದು ಅನ್ನೋದು ಈ ಗ್ರಾಮಸ್ಥರ ಲೆಕ್ಕಾಚಾರ. ಕಂದಕದ‌ ಮೇಲೆ ಬಿದಿರು ಹಾಗೂ ಕಟ್ಟಿಗೆಗಳನ್ನು ಇಟ್ಟು ಅದರ ಮೇಲೆ‌ ಪ್ಲಾಸ್ಟಿಕ್ ಚೀಲ ಹಾಕಿ, ಚೀಲದ ಮೇಲೆ ಸೊಪ್ಪು ಹಾಕಿ ಮುಚ್ಚಲಾಗಿದೆ. ಯಾವಾಗ ಬೇಕಾದರೂ ಕಾಡಾನೆಗಳು ಖೆಡ್ಡಾಗೆ ಬೀಳುವ ಸಾಧ್ಯತೆ ಇದೆ. ಹೊಸಕೊಪ್ಪಲು ಗ್ರಾಮದ ಅಮೃತ್ ಎಂಬುವವರ ಜಮೀನಿನಲ್ಲಿ ಗಜಪಡೆಗೆ ಖೆಡ್ಡಾ ಸಿದ್ದವಾಗಿದೆ. ಕಾಡಾನೆಗಳ ಕಾಟದಿಂದ ರೋಸಿ ಹೋದ ಜನರು ಈ ಪ್ಲ್ಯಾನ್​​ ಮಾಡಿದ್ದಾರೆ.ಕಾಡಾನೆಗಳು ಕಂದಕಕ್ಕೆ ಬಿದ್ದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments