ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳಲ್ಲಿನ ಬೆಳೆ ನಷ್ಟದ ಕುರಿತು ಸಮೀಕ್ಷೆ ಮಾಡಿರುವ ಜಿಲ್ಲಾಡಳಿತ ವರದಿ ತಯಾರಿಸಿದೆ. ಸುಮಾರು 8 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 8 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ರೈತರು 120 ಕೋಟಿಗೂ ಹೆಚ್ಚು ನಷ್ಟ ಅನುಭವಿಸಿದ್ದಾರೆ.ಶೀಘ್ರವಾಗಿ ರೈತರಿಗೆ ಪರಿಹಾರ ಧನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ಹೇಳಿದರು. 1500 ಮನೆಗಳು ಹಾನಿಯಾಗಿವೆ. ಮನೆಗಳ ಹಾನಿಯ ಪ್ರಮಾಣಕ್ಕೆ ಅನುಗುಣವಾಗಿ ಪರಿಹಾರ ವಿತರಣೆಗೆ ಕ್ರಮವಹಿಸಲಾಗುತ್ತದೆ. ಈಗಾಗಲೇ 5 ಕೋಟಿ ರೂ.ಬೆಳೆ ನಷ್ಟಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದರು.