ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎನ್ನುವುದೇ ನನ್ನ ಆಸೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ತಡೆಗಟ್ಟುವ ಉದ್ದೇಶದಿಂದ ಗ್ರಾಮ ವಾಸ್ತವ್ಯ ಮಾಡಿದ್ದೆ. ಈ ವೇಳೆ ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಿದೆ. ಆದರೆ, ಅಂದಿನ ಆರ್ಥಿಕ ಸಚಿವರಾಗಿದ್ದ ಬಿ.ಎಸ್.ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದರು. ಈ ವಿಚಾರವಾಗಿ ಬಿಎಸ್‌ವೈ ಕ್ಯಾಬಿನೆಟ್‌ನಲ್ಲಿ ಗಲಾಟೆ ಮಾಡಿದ್ದರು. ಬಿಎಸ್‌ವೈ ವಿರೋಧದ ನಡುವೆಯೇ ರೈತರ ಸಾಲ ಮನ್ನಾ ಮಾಡಿದ್ದೆ ಎಂದು ಹೇಳಿದರು.
ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡುತ್ತೇನೆ. ಒಂದು ಪಕ್ಷ ನಾನು ರೈತರ ಸಾಲ ಮನ್ನಾ ಮಾಡದ ಹೋದ್ರೆ ನೀವು ಹೇಳಿದ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.
ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎನ್ನುವುದೇ ನನ್ನ ಆಸೆ. ರಾಜ್ಯದಲ್ಲಿರುವ ರೈತರಿಗೆ ಬಡ್ಡಿ ರಹಿತ ಸಾಲದ ವ್ಯವಸ್ಥೆ ದೊರೆಯಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ