Webdunia - Bharat's app for daily news and videos

Install App

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಸೋಮವಾರ ಭಾರತ್ ಬಂದ್​ಗೆ ಕರೆ

Webdunia
ಭಾನುವಾರ, 26 ಸೆಪ್ಟಂಬರ್ 2021 (21:57 IST)
ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಸೋಮವಾರ ಭಾರತ್ ಬಂದ್​ಗೆ ಕರೆ ಕೊಟ್ಟಿವೆ. ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಪುರಭವನದಿಂದ ಮೈಸೂರು ಬ್ಯಾಂಕ್​ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್ ಸೇರಿದಂತೆ ವಿವಿಧ ರೈತ-ದಲಿತ ಸಂಘಟನೆಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ರೈತರು ಆಗಮಿಸುವ ಕಾರಣ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿಗಳು, 15 ಕ್ಕೂ ಅಧಿಕ ಎಸಿಪಿಗಳು, 100ಕ್ಕೂ ಹೆಚ್ಚು ಇನ್ಸ್​ಪೆಕ್ಟರ್​ಗಳು, 200ಕ್ಕೂ ಹೆಚ್ಚು ಸಬ್ ಇನ್ಸ್​ಪೆಕ್ಟರ್​ಗಳು ಹಾಗೂ ಕಾನ್​ಸ್ಟೇಬಲ್​ಗಳು ಸೇರಿದಂತೆ 4 ಸಾವಿರಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ನಿರಂತರ ಗಸ್ತು ‌ತಿರುಗಾಟ:
ಹೊಯ್ಸಳ, ಚೀತಾ ವಾಹನಗಳ ಮೂಲಕ ನಿರಂತರ ಗಸ್ತು ‌ತಿರುಗಾಟ ನಡೆಯಲಿದೆ. ಪ್ರತಿ ವಿಭಾಗದಲ್ಲಿಯೂ ಆಯಾ ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ಇರಲಿದೆ. 30ಕ್ಕೂ ಹೆಚ್ಚು ಕೆಎಸ್​ಆರ್​ಪಿ ತುಕಡಿಗಳು, 30ಕ್ಕೂ ಹೆಚ್ಚು ಸಿಎಆರ್​ ತುಕಡಿ ನಿಯೋಜಿಸಲಾಗಿದೆ. ಇದರ ಜೊತೆಗೆ ವಾಟರ್ ಜೆಟ್ ಇರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments