Select Your Language

Notifications

webdunia
webdunia
webdunia
webdunia

ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆ.27ರಂದು ಭಾರತ್ ಬಂದ್‌ಗೆ ಕರೆ

ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆ.27ರಂದು ಭಾರತ್ ಬಂದ್‌ಗೆ ಕರೆ
bangalore , ಶನಿವಾರ, 25 ಸೆಪ್ಟಂಬರ್ 2021 (21:36 IST)
ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆ.27ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದು,  ಖಾಸಗಿ ಶಾಲಾ ಸಂಘಟನೆಗಳು ಹಾಗೂ ಕೆಲ ರೈತ ಸಂಘಟನೆಗಳು ಬಂದ್​​ಗೆ ನೈತಿಕ ಬೆಂಬಲವಷ್ಟೇ ನೀಡಲು ತೀರ್ಮಾನಿಸಿವೆ.
ಸೋಮವಾರದಂದು ಶಾಲಾ-ಕಾಲೇಜುಗಳನ್ನು ಮುಚ್ಚುವುದಿಲ್ಲ.‌ ಕೋವಿಡ್‌ನಿಂದಾಗಿ ಈಗಷ್ಟೇ ಶಾಲಾ-ಕಾಲೇಜು ಆರಂಭವಾಗಿವೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆಗಳನ್ನ ಬಂದ್ ಮಾಡಲು ಆಗುವುದಿಲ್ಲ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿಯನ್ನು ಧರಿಸಿ ಈ ಮೂಲಕ ಭಾರತ್ ಬಂದ್​​ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.
ರೂಪ್ಸಾ ಬಣದ ಸದಸ್ಯರು ಕೂಡ ರೈತರಿಗೆ ನೈತಿಕ ಬೆಂಬಲ ನೀಡುತ್ತೇವೆಯೇ ವಿನಃ ಶಾಲೆಗಳನ್ನ ಬಂದ್ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಸದ್ಯ ತರಗತಿ ನಡೆಯುತ್ತಿರುವುದೇ 4-5 ದಿನ. ಈ ಮಧ್ಯೆ ಬಂದ್ ಅಂದರೆ ವಿದ್ಯಾರ್ಥಿಗಳ ಓದಿಗೆ ಕಷ್ಟವಾಗಲಿದೆ ಎಂದು ಹಾಲನೂರು ಎಸ್ ಲೇಪಾಕ್ಷಿ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿನಲ್ಲಿರುವ ಟಿಲ್ಲು ಗ್ಯಾಂಗ್ ಮೇಲೆ ಜೈಲಿನಲ್ಲೇ ಅಟ್ಯಾಕ್ ಮಾಡುವ ಸಾಧ್ಯತೆ