Publish Date: Wed, 01 Aug 2018 (17:04 IST)
Updated Date: Wed, 01 Aug 2018 (17:07 IST)
ಬ್ಯಾಂಕ್ ಸಿಬ್ಬಂದಿ ಮಹಿಳೆಯೊಬ್ಬರಿಗೆ ಚಿನ್ನ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ರೈತರು ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ರೈತರಿಂದ ಫೆಡರಲ್ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಫೆಡರಲ್ ಬ್ಯಾಂಕ್ ಮುಂದೆ ಈ ಘಟನೆ ನಡೆದಿದೆ. ಬ್ಯಾಂಕ್ ನಿಂದ ಮುನಿಯಮ್ಮ ಅವರಿಗೆ 21 ಗ್ರಾಂ ಚಿನ್ನ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಬ್ಯಾಂಕಿನ ಅಧಿಕಾರಿಗಳ ವಿರುದ್ಧ ರೈತ ಸಂಘದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ತಪ್ಪಿತಸ್ಥ ಬ್ಯಾಂಕ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಎಲ್ಲಾ ಬ್ಯಾಂಕ್ ಗಳು ರೈತರಿಗೆ ವಂಚನೆ ಮಾಡುತ್ತಿವೆ ಎಂದು ರೈತ ಸಂಘದ ಅಧ್ಯಕ್ಷ ಬೈರೇಗೌಡ ಆರೋಪ ಮಾಡಿದರು.