Select Your Language

Notifications

webdunia
webdunia
webdunia
webdunia

ರೇಷ್ಮೆ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಸಚಿವರನ್ನು ತರಾಟೆಗೆ ತೆಗೆದುಕೊಂಡವರಾರು?

ಸಚಿವ
ರೇಷ್ಮೆ ಮಾರುಕಟ್ಟೆಗೆ ರೇಷ್ಮೆ ಸಚಿವ ದಿಢೀರ್ ಭೇಟಿ ನೀಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ರೇಷ್ಮೆ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡು ಸೂಚನೆಗಳನ್ನು ನೀಡಿದರು. ಈ ವೇಳೆ ಸಚಿವ ಸಾ.ರಾ.ಮಹೇಶ್ ಅವರು ರೈತರು ಹಾಗೂ ರೀಲರ್‍ಗಳ ಜತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. 
 
ನೀವು ಬರುತ್ತೀರಿ ಹೋಗುತ್ತೀರಿ ಅಷ್ಟೇ. ನಮ್ಮ ಸಮಸ್ಯೆಗಳು ಪ್ರತಿದಿನ ಇರುತ್ತವೆ ಎಂದು ರೈತರು ಅಳಲನ್ನು ತೋಡಿಕೊಂಡರು. ಈ ವೇಳೆ ರೈತರನ್ನು ಸಚಿವರು ಸಮಾಧಾನಪಡಿಸಿದರು. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿ ಸಚಿವ ಮಹೇಶ್ ತಿಳಿಸಿದರು. 
 
 

Share this Story:

Follow Webdunia kannada

ಮುಂದಿನ ಸುದ್ದಿ

ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ ಶಾಸಕರಾರು ಗೊತ್ತಾ?