Select Your Language

Notifications

webdunia
webdunia
webdunia
webdunia

ನೀರಿಗಾಗಿ ರಸ್ತೆ ಸಂಚಾರ ಬಂದ್ ಮಾಡಿದ ರೈತರು

ನೀರಿಗಾಗಿ ರಸ್ತೆ ಸಂಚಾರ ಬಂದ್ ಮಾಡಿದ ರೈತರು
ಚಾಮರಾಜನಗರ , ಶನಿವಾರ, 1 ಜೂನ್ 2019 (17:55 IST)
ಸತತ ಬರಗಾಲದಿಂದ ತತ್ತರಿಸಿರುವ ಗಡಿ ಜಿಲ್ಲೆ ಜನರು ನೀರಿಗಾಗಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಚಾಮರಾಜನಗರದಲ್ಲಿನ ಕೆರೆಗಳಿಗೆ ನೀರುವ ತುಂಬಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಹಿಂದಿನ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ಸತತ ಬರಗಾಲಕ್ಕೆ ತುತ್ತಾಗಿದ್ದ ಚಾಮರಾಜನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನ ಜಾರಿಗಳಿಸಿವೆ. ಅದನ್ನ ಸಮರ್ಪಕವಾಗಿ ಜಾರಿಗೊಳಿಸಲು ರಾಜ್ಯದ ಸಮ್ಮಿಶ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ರೈತ ಸಂಘದ ಕಾರ್ಯಕರ್ತರು ಆರೋಪಿಸಿದರು. ಚಾಮರಾಜನಗರದ ಹೃದಯ ಭಾಗದ ಭುವನೇಶ್ವರಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾಕಾರರರು, ಕೆರೆಗಳಿಗೆ ನೀರುವ ತುಂಬಿಸುವ ಯೋಜನೆಯಲ್ಲಿ ತಾರತಮ್ಯ ನೀತಿ ಅನಸರಿಸುತ್ತಿದೆ ಎಂದು ಆಪಾದಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸುತ್ತಿದ್ದಾರೆ, ಆದರೆ ಪಕ್ಕದ ಗುಂಡ್ಲುಪೇಟೆ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತ ಪಡಿಸಿದರು. ಈ ವೇಳೆ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಗೊಂಡಿತ್ತು.




Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಸಿ.ಪಾಟೀಲ್ ಸಿಡಿಸಿದ್ರು ಹೊಸ ಬಾಂಬ್