Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯ ಪ್ರಕರಣಗಳು ನಾಗರಿಕ ಸಮಾಜಕ್ಕೆ ಮಾರಕ: ಉಗ್ರಪ್ಪ

Webdunia
ಬುಧವಾರ, 4 ಜನವರಿ 2017 (17:04 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಹಾಗೂ ಕಮ್ಮನಹಳ್ಳಿಯಲ್ಲಿ ಯುವತಿಯನ್ನು ನಡುರಸ್ತೆಯಲ್ಲಿಯೇ ಅಡ್ಡಗಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಗಳು ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಷಯ ಎಂದು ಮಹಿಳಾ ದೌರ್ಜನ್ಯ ಹಾಗೂ ಅತ್ಯಾಚಾರ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ. 
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡನೀಯ. ಇಂತಹ ಹೇಯ ಕೃತ್ಯಗಳ ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದರು.
 
ಇಂತಹ ನೀಚ ಘಟನೆಗಳು ಶತಮಾನದಿಂದಲೂ ನಡೆಯುತ್ತಿವೆ. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾರು ದೂರು ನೀಡಿಲ್ಲ. ಕೃತ್ಯ ಎಸಗಿದವರು ಯಾರು ಎಂದು ತಿಳಿಯದ ಕಾರಣ ಅನಾಮಧೇಯರು ಎಂದು ದೂರಿನಲ್ಲಿ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು. 
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ