Select Your Language

Notifications

webdunia
webdunia
webdunia
webdunia

ಶಾಸಕ ಇಕ್ಬಾಲ್ ನನ್ನ ನಡುವೆ ತಂದೆ-ಮಗಳ ಸಂಬಂಧ: ಅಶ್ಲೀಲ ವಿಡಿಯೋ ಬಗ್ಗೆ ಯುವತಿ ದೂರು

Iqbal Hussain

Sampriya

ರಾಮನಗರ , ಗುರುವಾರ, 2 ಮೇ 2024 (20:15 IST)
Photo Courtesy X
ರಾಮನಗರ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೆ ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಯುವತಿಯದ್ದು ಎನ್ನಲಾದ ಸಂಭಾಷಣೆಯ ವಿಡಿಯೋ ವೈರಲ್ ಆಗಿದೆ.

ಈ ಸಂಬಂಧ ಯುವತಿ ನಗರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮಾನಕ್ಕೆ ಧಕ್ಕೆ ತಂದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ಯುವತಿ ನೀಡಿದ ದೂರಿನಲ್ಲಿ ಹೀಗಿದೆ: ಶಾಸಕ ಇಕ್ಬಾಲ್ ಹುಸೇನ್ ಮತ್ತು ನನ್ನ ನಡುವಿನ ಸಂಬಂಧ ತಂದೆ, ಮಗಳ ಸಂಬಂಧವಾಗಿದೆ. ಇಕ್ಬಾಲ್ ಅವರು ನನ್ನ ಜತೆಯಾಗಲಿ, ಬೇರೆಯವರ ಜತೆಯಾಗಲಿ ಅವರು ಅಸಭ್ಯವಾಗಿ ವರ್ತಿಸಲ್ಲ ಎಂದು ದೂರಿನಲ್ಲಿ ಯುವತಿ ಉಲ್ಲೇಖಿಸಿದ್ದಾರೆ.

ಇನ್ನೂ ವಿಡಿಯೋದಲ್ಲಿ ನಾನು ಶಾಸಕರೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡಿರುವಂತೆ ಅಶ್ಲೀಲ ವಿಡಿಯೋ ಸೃಷ್ಟಿಸಲಾಗಿದೆ. ತಮ್ಮಣ್ಣಗೌಡ ಗುಂಡ್ಕಲ್ ಎಂಬುವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅದನ್ನು ಹಂಚಿಕೊಂಡು ನನ್ನ ಮಾನಕ್ಕೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇ 5ರವರೆಗೆ ಕೊಪ್ಪಳದಲ್ಲಿ ತೀವ್ರ ಶಾಖದ ಅಲೆ: ಮುನ್ನೆಚ್ಚರಿಕೆ ಸಲಹೆ ಕೊಟ್ಟ ಜಿಲ್ಲಾಡಳಿತ