Webdunia - Bharat's app for daily news and videos

Install App

ಶಾಸಕ ಇಕ್ಬಾಲ್ ನನ್ನ ನಡುವೆ ತಂದೆ-ಮಗಳ ಸಂಬಂಧ: ಅಶ್ಲೀಲ ವಿಡಿಯೋ ಬಗ್ಗೆ ಯುವತಿ ದೂರು

Sampriya
ಗುರುವಾರ, 2 ಮೇ 2024 (20:15 IST)
Photo Courtesy X
ರಾಮನಗರ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೆ ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಯುವತಿಯದ್ದು ಎನ್ನಲಾದ ಸಂಭಾಷಣೆಯ ವಿಡಿಯೋ ವೈರಲ್ ಆಗಿದೆ.

ಈ ಸಂಬಂಧ ಯುವತಿ ನಗರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮಾನಕ್ಕೆ ಧಕ್ಕೆ ತಂದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ಯುವತಿ ನೀಡಿದ ದೂರಿನಲ್ಲಿ ಹೀಗಿದೆ: ಶಾಸಕ ಇಕ್ಬಾಲ್ ಹುಸೇನ್ ಮತ್ತು ನನ್ನ ನಡುವಿನ ಸಂಬಂಧ ತಂದೆ, ಮಗಳ ಸಂಬಂಧವಾಗಿದೆ. ಇಕ್ಬಾಲ್ ಅವರು ನನ್ನ ಜತೆಯಾಗಲಿ, ಬೇರೆಯವರ ಜತೆಯಾಗಲಿ ಅವರು ಅಸಭ್ಯವಾಗಿ ವರ್ತಿಸಲ್ಲ ಎಂದು ದೂರಿನಲ್ಲಿ ಯುವತಿ ಉಲ್ಲೇಖಿಸಿದ್ದಾರೆ.

ಇನ್ನೂ ವಿಡಿಯೋದಲ್ಲಿ ನಾನು ಶಾಸಕರೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡಿರುವಂತೆ ಅಶ್ಲೀಲ ವಿಡಿಯೋ ಸೃಷ್ಟಿಸಲಾಗಿದೆ. ತಮ್ಮಣ್ಣಗೌಡ ಗುಂಡ್ಕಲ್ ಎಂಬುವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅದನ್ನು ಹಂಚಿಕೊಂಡು ನನ್ನ ಮಾನಕ್ಕೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments