Webdunia - Bharat's app for daily news and videos

Install App

ಫಲಿತಾಂಶ ವೀಕ್ಷಿಸಲು ತೆರಳುತ್ತಿದ್ದ ತಂದೆ, ಮಗಳಿಗೆ ಅಪಘಾತ: ತಂದೆ ಸಾವು

Webdunia
ಶುಕ್ರವಾರ, 10 ಏಪ್ರಿಲ್ 2015 (13:37 IST)
ಮಗಳ ಪರೀಕ್ಷಾ ಫಲಿತಾಂಶವನ್ನು ನೋಡಲು ತೆರಳುತ್ತಿದ್ದ ತಂದೆ ಹಾಗೂ ಮಗಳು ಅಪಘಾತಕ್ಕೀಡಾಗಿದ್ದು, ತಂದೆ ಘಟನಾ ಸ್ಥಳದಲ್ಲಿಯೇ ಸಾವನ್ನಪ್ಪಿ ಮಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೋಟೆಹುಂಡಿಯ ಬಳಿ ನಡೆದಿದೆ.  
 
ಅಪಘಾತದಲ್ಲಿ ವಿದ್ಯಾರ್ಥಿನಿಯ ತಂದೆ ಮಹಾದೇವ(40) ಮೃತ ದುರ್ದೈವಿಯಾಗಿದ್ದಾರೆ. ಇನ್ನು ಇವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದು ಬಂದಿಲ್ಲ. 
 
ಪ್ರಕರಣದ ಹಿನ್ನೆಲೆ: ಮಗಳು 9ನೇ ತರಗತಿಯಲ್ಲಿ ಅಭ್ಯಸಿಸುತ್ತಿದ್ದು, ಇಂದು ಫಲಿತಾಂಶ ಪ್ರಕಟಗೊಳ್ಳಲಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಮಗಳು ರಾಜೇಶ್ವರಿ ಅವರನ್ನು ಕರೆದುಕೊಂಡು ಮಹಾದೇವ್ ಶಾಲೆಯತ್ತ ಮೃತ ಮಹಾದೇವ ದ್ವಿ ಚಕ್ರ ವಾಹನದಲ್ಲಿ ಸಾಗಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನ ಚಲಾಯಿಸುತ್ತಿದ್ದ ವಿದ್ಯಾರ್ಥಿನಿಯ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ರಾಜೇಶ್ವರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. 
 
ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments