Publish Date: Sat, 27 Mar 2021 (08:19 IST)
Updated Date: Sat, 27 Mar 2021 (08:20 IST)
ಮುಜಫರ್ನಗರ : ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತನ್ನ ಮಗನನ್ನು ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.
ಆರೋಪಿಗೆ ಮೂವರು ಮಕ್ಕಳಿದ್ದು, ಮೊದಲನೆಯ ಮಗ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತನ ಜೊತೆ ಆರೋಪಿ ಜಗಳವಾಡಿದ್ದಾನೆ. ಆ ವೇಳೆ ಸುತ್ತಿಗೆಯಿಂದ ಆತನ ತಲೆಗೆ ಹೊಡೆದಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಆತನನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಸಾವನಪ್ಪಿದ್ದಾನೆ.
ಬಳಿಕ ಪೊಲೀಸರಿಗೆ ತಿಳಿಸದೆ ಆತನ ಶವ ಸಂಸ್ಕಾರ ಮಾಡಲಾಗಿದೆ. ಆದರೆ ಆರೋಪಿಯ ಪತ್ನಿ ಮಗನ ಸಾವಿನ ವಿಚಾರವನ್ನು ಪೊಲೀಸರಿಗೆ ತಿಳಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.