Webdunia - Bharat's app for daily news and videos

Install App

ಅಪ್ಪ ಎಂಬ ಪಟ್ಟಕ್ಕೇ ಮಸಿ ಬಳಿದ ಪಾಪಿ: ಮಗಳನ್ನೇ ಗರ್ಭಿಣಿ ಮಾಡಿದ

Krishnaveni K
ಬುಧವಾರ, 4 ಸೆಪ್ಟಂಬರ್ 2024 (10:28 IST)
ತುಮಕೂರು: ಅಪ್ಪ ಎಂಬ ಪಟ್ಟಕ್ಕೇ ಈ ಪಾಪಿ ಮಸಿ ಬಳಿದಿದ್ದಾನೆ. ತನ್ನ ಹದಿಹರೆಯದ ಮಗಳ ಮೇಲೆಯೇ ರೇಪ್ ಮಾಡಿ ಆಕೆ ಗರ್ಭಿಣಿಯಾಗಲು ಕಾರಣವಾಗಿದ್ದಾನೆ. ಈ ಘಟನೆ ನಡೆದಿರುವುದು ತುಮಕೂರಿನಲ್ಲಿ.

14 ವರ್ಷದ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರವೆಸಗಿದ ಕಾರಣಕ್ಕೆ ಆಕೆ ಗರ್ಭಿಣಿಯಾಗಿದ್ದಾಳೆ. ತುಮಕೂರಿನ ಹೊನ್ನವಳ್ಳಿಯಲ್ಲಿ ಈ ಘಟನೆ ನಡೆದಿದೆ. ಕೆಲಸಕ್ಕೆಂದು ಬೇರೆ ರಾಜ್ಯದಿಂದ ಇಲ್ಲಿಗೆ ವಲಸೆ ಬಂದಿದ್ದ ವ್ಯಕ್ತಿ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ.

ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ತಾಯಿ ಆಸ್ಪತ್ರೆಗೆ ಕರೆದೊಯ್ದಾಗ ಪ್ರಕರಣ ಬೆಳಕಿಗೆ ಬಂದಿದೆ.  ಬಾಲಕಿ ಈಗ ಮೂರು ತಿಂಗಳ ಗರ್ಭಿಣಿಯಾಗಿದ್ದು, ವಿಷಯ ತಿಳಿಯುತ್ತಿದ್ದಂತೇ ಪೊಲೀಸರು ಪೋಕ್ಸೋ ಖಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಮಾರು ಎಂಟು ತಿಂಗಳ ಹಿಂದಷ್ಟೇ ಈ ಕುಟುಂಬ ಕೂಲಿ ಕೆಲಸಕ್ಕಾಗಿ ತುಮಕೂರಿಗೆ ಬಂದು ಹೊನ್ನವಳ್ಳಿಯಲ್ಲಿ ವಾಸ್ತವ್ಯ ಹೂಡಿತ್ತು. ಆದರೆ ತಂದೆಯೇ ತನ್ನ ಮೇಲೆ ನಡೆಸಿದ ಕ್ರೌರ್ಯದ ಬಗ್ಗೆ ಯಾರಿಗೂ ಹೇಳಲಾಗದೇ ಬಾಲಕಿ ಒಳಗೊಳಗೇ ಕುಗ್ಗಿಹೋಗಿದ್ದಳು. ಇದೀಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments