Publish Date: Sat, 22 Oct 2016 (12:43 IST)
Updated Date: Sat, 22 Oct 2016 (12:45 IST)
ಮಲಮಗಳ ಮೇಲೆ ತಂದೆಯೋರ್ವ ಅತ್ಯಾಚಾರವೆಸಗಿ ಕೊಲೆಗೈದಿರುವ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ರಮೇಶ್ ಎನ್ನುವ ಪಾಪಿ ತಂದೆ ಮಲಮಗಳ ಮೇಲೆ ಅತ್ಯಾಚಾರವೆಸಗಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಕೊಲೆಗೈದಿದ್ದಾನೆ. ಮೂರು ವರ್ಷಗಳ ಹಿಂದೆ ಮೃತ ಯುವತಿ ಯಶೋಧಾಳ ತಾಯಿ, ಮೊದಲ ಗಂಡನನ್ನು ಬಿಟ್ಟು ಆರೋಪಿ ರಮೇಶ್ ಜೊತೆ ಓಡಿ ಹೋಗಿದ್ದರು.
ಮಲಮಗಳು ಯಶೋಧಾ ಜೊತೆ ಆರೋಪಿ ರಮೇಶ್ ಲೈಂಗಿಕ ಸಂಪರ್ಕ ಹೊಂದಿದ್ದು, ಇದು ತನ್ನ ಪತ್ನಿಗೆ ಗೊತ್ತಾಗುತ್ತದೆ ಎಂದು ತಿಳಿದು ಯಶೋಧಾ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶೋಧಾ ಚಿಕಿತ್ಸೆ ಫಲಿಸದೆ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದಾಳೆ. ಈ ಸಂಬಂಧ ತಲಗ್ಗಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ