Publish Date: Thu, 07 Dec 2017 (09:42 IST)
Updated Date: Thu, 07 Dec 2017 (09:48 IST)
ಮೈಸೂರು: ಮೈಸೂರ ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ಹಕ್ಕಿ ಜ್ವರದ ಭೀತಿ ಕಾಣಿಸಿಕೊಂಡಿದೆ. ಕೆರೆಯಲ್ಲಿ ಇದ್ದಕ್ಕಿದ್ದಂತೆ ಎರಡು ಪೆಲಿಕಾನ್ ಪಕ್ಷಿಗಳು ಅಸ್ವಸ್ಥಗೊಂಡವು. ಕುಕ್ಕರಹಳ್ಳಿಯ ಕೆರೆಯ ಸಿಬ್ಬಂದಿಗಳು ಅಸ್ವಸ್ಥಗೊಂಡ ಪೆಲಿಕಾನ್ ಹಕ್ಕಿಗಳನ್ನು ರಕ್ಷಿಸಿದ್ದಾರೆ.
ಕುಕ್ಕರಹಳ್ಳಿ ಕೆರೆಯಲ್ಲಿ ಇದ್ದಕ್ಕಿದ್ದಂತೆ ಪೆಲಿಕಾನ್ ಪಕ್ಷಿಗಳು ಹುಷಾರು ತಪ್ಪಿವೆ. ಇವುಗಳನ್ನು ಬೋಟ್ ಸಹಾಯದಿಂದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಪಕ್ಷಿಗಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಚುಚ್ಚುಮದ್ದನ್ನು ನೀಡಲಾಗಿದೆ ಹಾಗೂ ಪಕ್ಷಿ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.
ಹಕ್ಕಿಗಳಿಗೆ ಪೀಪಲ್ ಫಾರ್ ಅನಿಮಲ್ಸ್ ಸಂಸ್ಥೆಯಲ್ಲಿ ಈ ಪಕ್ಷಿಗಳಿಗೆ ಆಶ್ರಯ ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ