Select Your Language

Notifications

webdunia
webdunia
webdunia
webdunia

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಕರ್ನಾಟಕ ಹವಾಮಾನ

Sampriya

ಬೆಂಗಳೂರು , ಬುಧವಾರ, 21 ಮೇ 2025 (15:36 IST)
Photo Credit X
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಕುಡಿಯುವ ನೀರು ಕಲುಷಿತವಾಗುವ ಸಾಧ್ಯತೆಯಿದ್ದು,  ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು, ಎಚ್ಚರದಿಂದ ಇರಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಳೆಯಿಂದಾಗಿ ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿವೆ, ಇದರಿಂದ ಮನೆಗಳಿಗೆ ಸರಬರಾಜಾಗುವ ನೀರು ಕಲುಷಿತಗೊಳ್ಳುವ ಸಂಭವವಿರುತ್ತದೆ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಮುಂಜಾಗರೂಕತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಆರೋಗ್ಯ ದೃಷ್ಟಿಯಲ್ಲಿ ನೀರನ್ನು ಕಾದಾರಿಸಿ ಕುಡಿಯುವುದು ಕ್ಷೇಮ ಎಂದರು.

ಕಡು ಬೇಸಿಗೆಯ ನಂತರ ಒಮ್ಮೆಲೆ ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ. ಶಾಲೆಗಳು ಪುನರಾರಂಭವಾಗುವ ದಿನಗಳು ಸಮೀಪಿಸಿರುವುದರಿಂದ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇರಿಸಿಕೊಳ್ಳಬೇಕು ಎಂದರು.

ಈ ಸಂಬಂಧ ಪಂಚಾಯತ್‌ ರಾಜ್‌ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದು, ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚಿಸಲು ನಿರ್ದೇಶಿಸಿದ್ದಾರೆ.

ನೀರಿನ ಮೂಲಗಳಲ್ಲಿ ಹಾಗೂ ನೀರು ಸರಬರಾಜು ಕೊಳವೆ ಮಾರ್ಗಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ಹಾಗೂ ಕಲುಷಿತಗೊಳ್ಳದಂತೆ ತಡೆಯಲು ಅಧಿಕಾರಿಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ನೀರು ಮಾದರಿ ಪರೀಕ್ಷೆ ಮಾಡುವ ಪ್ರಯೋಗಾಲಯಗಳನ್ನು ಸಮರ್ಪಕವಾಗಿ ನಿರ್ವಹಿಸುವತ್ತ ಗಮನ ಹರಿಸಬೇಕೆಂದು ಸಚಿವರು ನಿರ್ದೇಶನ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ