Webdunia - Bharat's app for daily news and videos

Install App

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

Sampriya
ಬುಧವಾರ, 21 ಮೇ 2025 (15:36 IST)
Photo Credit X
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಕುಡಿಯುವ ನೀರು ಕಲುಷಿತವಾಗುವ ಸಾಧ್ಯತೆಯಿದ್ದು,  ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು, ಎಚ್ಚರದಿಂದ ಇರಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಳೆಯಿಂದಾಗಿ ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿವೆ, ಇದರಿಂದ ಮನೆಗಳಿಗೆ ಸರಬರಾಜಾಗುವ ನೀರು ಕಲುಷಿತಗೊಳ್ಳುವ ಸಂಭವವಿರುತ್ತದೆ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಮುಂಜಾಗರೂಕತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಆರೋಗ್ಯ ದೃಷ್ಟಿಯಲ್ಲಿ ನೀರನ್ನು ಕಾದಾರಿಸಿ ಕುಡಿಯುವುದು ಕ್ಷೇಮ ಎಂದರು.

ಕಡು ಬೇಸಿಗೆಯ ನಂತರ ಒಮ್ಮೆಲೆ ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ. ಶಾಲೆಗಳು ಪುನರಾರಂಭವಾಗುವ ದಿನಗಳು ಸಮೀಪಿಸಿರುವುದರಿಂದ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇರಿಸಿಕೊಳ್ಳಬೇಕು ಎಂದರು.

ಈ ಸಂಬಂಧ ಪಂಚಾಯತ್‌ ರಾಜ್‌ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದು, ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚಿಸಲು ನಿರ್ದೇಶಿಸಿದ್ದಾರೆ.

ನೀರಿನ ಮೂಲಗಳಲ್ಲಿ ಹಾಗೂ ನೀರು ಸರಬರಾಜು ಕೊಳವೆ ಮಾರ್ಗಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ಹಾಗೂ ಕಲುಷಿತಗೊಳ್ಳದಂತೆ ತಡೆಯಲು ಅಧಿಕಾರಿಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ನೀರು ಮಾದರಿ ಪರೀಕ್ಷೆ ಮಾಡುವ ಪ್ರಯೋಗಾಲಯಗಳನ್ನು ಸಮರ್ಪಕವಾಗಿ ನಿರ್ವಹಿಸುವತ್ತ ಗಮನ ಹರಿಸಬೇಕೆಂದು ಸಚಿವರು ನಿರ್ದೇಶನ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬರ್ತಾರೆಂದು ಮೆಟ್ರೋ ನಿಲ್ದಾಣ ಕ್ಲೀನಿಂಗ್: ದಿನಕ್ಕೊಂದು ಕಡೆ ಪಾದ ಬೆಳೆಸಿ ಸಾರ್ ಎಂದ ನೆಟ್ಟಿಗರು

ಕನ್ನಡ ಮಾತನಾಡಲ್ಲ ಎಂದಿದ್ದ ಎಸ್ ಬಿಐ ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

Chhattisgarh Encounter: ಛತ್ತೀಸ್‌ಗಢದಲ್ಲಿ ಗುಂಡಿನ ಸದ್ದು: 26 ನಕ್ಸಲನ್ನು ಬೇಟೆಯಾಡಿದ ಭದ್ರತಾ ಪಡೆ

ಮುಂದಿನ ಸುದ್ದಿ
Show comments