Webdunia - Bharat's app for daily news and videos

Install App

ಮಡಿಕೇರಿಯಲ್ಲಿ ಭೂ ಕುಸಿತದ ಆತಂಕ..!

Webdunia
ಬುಧವಾರ, 14 ಜೂನ್ 2023 (14:05 IST)
ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ.

ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ. 

ಇದು ಖಾಸಗಿ ಜಾಗವಾಗಿದ್ದು ಸುಮಾರು 10 ವರ್ಷಗಳ ಹಿಂದೆ ಇಲ್ಲಿ ಸುಮಾರು 80ಕ್ಕೂ ಅಧಿಕ ಎಕರೆ ಜಾಗವನ್ನು ಸ್ಥಳೀಯರು ಆಂಧ್ರ ಮೂಲದ ಉದ್ಯಮಿಗಳಿಗೆ ಮಾರಾಟ ಮಾಡಿದ್ದರು. ಅಪ್ಪಾರಾವ್, ಸುಬ್ಬಯಮ್ಮ ಮತ್ತು ವೇಂಕಟೇಶ್ವರ ರವಿ ರೆಡ್ಡಿ ಎಂಬವರು ಈ ಬೆಟ್ಟದ ಮಾಲೀಕರಾಗಿದ್ದಾರೆ.

ಇದರಲ್ಲಿ 38 ಎಕರೆ ಜಾಗದಲ್ಲಿ ಜೆಸಿಬಿ ಬಳಸಿ ಬೆಟ್ಟವನ್ನ ಸಮತಟ್ಟುಗೊಳಿಸಲಾಗುತ್ತಿದೆ. ಅಲ್ಲದೇ ಖಾಸಗಿ ಜಾಗ ಎಂದು ಹೇಳಿಕೊಳ್ಳುವ ಜಾಗದ ಮಾಲೀಕರು ಜಾಗದಲ್ಲಿದ್ದ ನೂರಾರು ಮರಗಳ ಮಾರಣಹೋಮ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಈ ಮರಗಳ ಕಟಾವಿಗೆ ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆದಿಲ್ಲ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಫ್ಒ ಪೂವಯ್ಯ, ತಮ್ಮ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುಮಾರು 80 ರಿಂದ 100 ಮರಗಳು ನಾಶವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ ಜಾಗದ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments