Select Your Language

Notifications

webdunia
webdunia
webdunia
webdunia

Fengal Cyclone: ಕರ್ನಾಟಕ ಲೇಟೆಸ್ಟ್ ಹವಾಮಾನ ವರದಿ: ಚಂಡಮಾರುತದ ಮಳೆ ಇನ್ನೆಷ್ಟು ದಿನ ಇರುತ್ತೆ ನೋಡಿ

Bangalore Rains

Krishnaveni K

ಬೆಂಗಳೂರು , ಸೋಮವಾರ, 2 ಡಿಸೆಂಬರ್ 2024 (09:50 IST)
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಾದ್ಯಂತ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ಮಳೆಯಾಗುತ್ತಲೇ ಇದೆ. ಈ ಮಳೆ ಎಷ್ಟು ದಿನವರೆಗೆ ಇರಲಿದೆ ಇಲ್ಲಿ ನೋಡಿ.

ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು ತಮಿಳುನಾಡು ಮಾತ್ರವಲ್ಲದೆ, ಕೇರಳ, ಕರ್ನಾಟಕದಲ್ಲೂ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ. ಕೇರಳದಲ್ಲಿ ರೆಡ್ ಅಲರ್ಟ್, ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನದ ನಂತರ ಆರಂಭವಾದ ಮಳೆ ಇಂದೂ ಮುಂದುವರಿದಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ರ ಜೆಘೋಷಿಸಲಾಗಿಲ್ಲ.

ಫೆಂಗಲ್ ಚಂಡ ಮಾರುತದ ಮಳೆಯಿಂದಾಗಿ ಚೆನ್ನೈನಲ್ಲಿ ಪ್ರವಾಹ ಸದೃಶ ವಾತಾವರಣವಿದೆ. ಪುದುಚೇರಿಯಲ್ಲಿ ಹಿಂದೆಂದೂ ಕಾಣದಷ್ಟು ಮಳೆಯಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೇರಳದಲ್ಲೂ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶಕ್ಕೆ ಯಾರಾದರೂ ಚಿನ್ನ ತನ್ನಿ, ನೆರವು ನಾವು ಕೊಡ್ತೀವಿ: ಸಿಎಂ ಸಿದ್ದರಾಮಯ್ಯ