Publish Date: Wed, 25 Jan 2017 (18:16 IST)
Updated Date: Wed, 25 Jan 2017 (18:18 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವ ರಮೇಶ್ ಜಾರಕಿಹೊಳಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತನ್ನು ವಶಪಡಿಸಿಕೊಂಡಿದ್ದಾರೆ. ಸಧ್ಯದಲ್ಲಿಯೇ ಮತ್ತಷ್ಟು ನಾಯಕರು ಐಟಿ ಬಲೆಗೆ ಬೀಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಐಟಿ ಬಲೆಗೆ ಬಿದ್ದಿದ್ದಾರೆ. ಸಧ್ಯದಲ್ಲಿಯೇ ಮತ್ತಷ್ಟು ನಾಯಕರು ಐಟಿ ಬಲೆಗೆ ಬಿಳಲಿದ್ದಾರೆ ಎಂದರು.
ತಮ್ಮ ಸಂಪುಟದ ಸಚಿವರ ಮೇಲೆ ಐಟಿ ದಾಳಿ ನಡೆದಿರುವ ಕುರಿತು ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿರುವುದು ಬೇಜವಾಬ್ದಾರಿತನದ ನಡುವಳಿಕೆ ಎಂದು ಕಿಡಿಕಾರಿದರು.
ಓಬಿಸಿ ಸಮಾವೇಶಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟದಲ್ಲಿ ಅತ್ಯಂತ ಭ್ರಷ್ಟ ಸರಕಾರವಿದೆ. ಇದನ್ನು ತೊಲಗಿಸಿ ಎಂದು ಹೇಳಿದ್ದರು. ಇದೀಗ ಅವರ ಮಾತು ನಿಜ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಕೇವಲ ರಮೇಶ್ ಜಾರಕಿಹೊಳಿ ಅಲ್ಲ, ಇನ್ನಷ್ಟು ನಾಯಕರು ಐಟಿ ಬಲೆಗೆ ಬೀಳಲಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾರ್ಮಿಕವಾಗಿ ನುಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ