Webdunia - Bharat's app for daily news and videos

Install App

ಶಕ್ತಿ ಯೋಜನೆಗೆ ಫಿದಾ: ವಿದ್ಯಾರ್ಥಿನಿಯಿಂದ ಸಿಎಂಗೆ ಉಚಿತ್ ಬಸ್‌ ಟಿಕೆಟ್‌ಗಳ ಮಾಲಾರ್ಪಣೆ

Sampriya
ಮಂಗಳವಾರ, 23 ಏಪ್ರಿಲ್ 2024 (14:51 IST)
Photo Courtesy X
ಅರಸೀಕೆರೆ: ಲೋಕಸಭೆ ಚುನಾವಣೆ ಹಿನ್ನೆಲೆ ಅರಸೀಕೆರೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್‌ಗಳ ಮಾಲೆ ಹಾಕಿ ಕೃತಜ್ಞತೆ ಸಲ್ಲಿಸಿದರು.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅರಸೀಕೆರೆಯ  ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ?

ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು.

‘’ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ.  ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ’’  ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು.

‘ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು' ಎಂದು ಹಾರೈಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments