Publish Date: Sat, 27 Nov 2021 (20:59 IST)
Updated Date: Sat, 27 Nov 2021 (21:02 IST)
ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವಂತೆ ಕೋಲಾರ - ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಪರ ಸಚಿವರಾದ ಡಾ. ಕೆ. ಸುಧಾಕರ್ ಮತ್ತು ಮುನಿರತ್ನ ಅವರು ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಬೆನ್ನಲ್ಲೇ ಇವರಿಗೆ ಬೆಂಬಲ ಸೂಚಿಸಿ ಇತರೆ ಪಕ್ಷಗಳ ಅನೇಕ ಮುಖಂಡರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ.
ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಚಂದ್ರ ರೆಡ್ಡಿ, ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಶ್ರೀ ಶ್ರೀನಿವಾಸ್ ಹಾಗೂ ಬಂಗಾರಪೇಟೆ ಕ್ಷೇತ್ರದ ಶ್ರೀ ಕಪಾಲಿ ಶ್ರೀನಿವಾಸ್ ರವರು ಸನ್ಮಾನ್ಯ ಮುಖ್ಯಮಂತ್ರಿಗಳ ಸಮುಖದಲ್ಲಿ ಕಾಂಗ್ರೆಸ್ ತೊರೆದು ಸಚಿವ ಸುಧಾಕರ್ ಹಾಗೂ ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ಶನಿವಾರ ಬಿ.ಜೆ.ಪಿ ಪಕ್ಷಕ್ಕೆ ಸೇರ್ಪಡೆಯಾದರು.