Select Your Language

Notifications

webdunia
webdunia
webdunia
webdunia

ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಶುರುವಾಗಿದೆ ಫೈಟ್

ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ  ಟಿಕೆಟ್ ಗಾಗಿ ಬಿಜೆಪಿಯಲ್ಲಿ ಶುರುವಾಗಿದೆ ಫೈಟ್
ಬೆಂಗಳೂರು , ಮಂಗಳವಾರ, 24 ಸೆಪ್ಟಂಬರ್ 2019 (11:11 IST)
ಬೆಂಗಳೂರು : ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ.




ಅ.21 ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಟಿಕೆಟ್ ಫೈನಲ್ ಆಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಂಟಿಬಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ನಿಲ್ಲುವುದಾಗಿ ಎಚ್ಚರಿಕೆ ನೀಡಿದ್ದಾರೆ  ಎನ್ನಲಾಗಿದೆ.


ಈ ಬಗ್ಗೆ ಸಂಸದ ಬಚ್ಚೇಗೌಡ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದ್ದು, ಹೊಸಕೋಟೆ ಬಿಜೆಪಿ ಟಿಕೆಟ್ ಗೆ ನನ್ನ ಪುತ್ರ ಪಟ್ಟು ಹಿಡಿದಿದ್ದಾನೆ. ನಾನು ಏನೇ ಹೇಳಿದರೂ ಅದಕ್ಕೆ ಶರತ್ ಬಚ್ಚೇಗೌಡ ಕೇಳುತ್ತಿಲ್ಲ. ಅವನನ್ನು ಸಮಾಧಾನ ಪಡಿಸಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಇಂದು ಕೈ ನಾಯಕರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ