Publish Date: Tue, 18 Apr 2023 (20:40 IST)
Updated Date: Tue, 18 Apr 2023 (19:51 IST)
ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ಚುನಾವಣಾ ಕಣ ರಂಗೇರಿದೆ. ಅಫಜಲಪುರ ಕ್ಷೇತ್ರದಲ್ಲಿ ಗುತ್ತೇದಾರ್ ಸಹೋದರರ ನಡುವೆ ಬಿಗ್ ಫೈಟ್ ಶುರುವಾಗಿದೆ. ಮಾಲೀಕಯ್ಯ ಗುತ್ತೇದಾರ್ ಹಾಗೂ ಸಹೋದರ ನಿತಿನ್ ಮಧ್ಯೆ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಯಿಂದ ಮಾಲೀಕಯ್ಯ ಗುತ್ತೇದಾರ್ ಕಣಕ್ಕಿಳಿದಿದ್ದಾರೆ. ಇತ್ತ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್ ಸ್ಪರ್ಧೆ ಮಾಡಲಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಿತಿನ್ ಗುತ್ತೇದಾರ್ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್ ಸ್ವರ್ಧಿಸುತ್ತಿದ್ದಾರೆ. ಈ ವೇಳೆ ನಿತಿನ್ ನಿವಾಸಕ್ಕೆ ಭೇಟಿ ನೀಡಿದ್ದ ಮಾಲೀಕಯ್ಯ ಗುತ್ತೇದಾರ್ ಬೆಂಬಲ ನೀಡುವಂತೆ ನಿತಿನ್ಗೆ ಮನವಿ ಮಾಡಿಕೊಂಡಿದ್ರು. ಮಾಲೀಕಯ್ಯ ಗುತ್ತೇದಾರ್ ಮಾತಿಗೆ ಒಪ್ಪದ ನಿತಿನ್, ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ನನಗೆ ಆಶೀರ್ವಾದ ಮಾಡಿ ಎಂದು ಹೇಳಿದ್ದಾರೆ.