Select Your Language

Notifications

webdunia
webdunia
webdunia
webdunia

ರಾಜ್ಯೋತ್ಸವ ದಿನದಂದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ: 20ಕ್ಕೂ ಅಧಿಕ ಮಂದಿ ವಶಕ್ಕೆ

ರಾಜ್ಯೋತ್ಸವ ದಿನದಂದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ: 20ಕ್ಕೂ ಅಧಿಕ ಮಂದಿ ವಶಕ್ಕೆ
ಕಲಬುರಗಿ , ಸೋಮವಾರ, 1 ನವೆಂಬರ್ 2021 (20:06 IST)
ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರಗಳಿಂದ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ
ಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಅಧಿಕ ಜ‌ನ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯೋತ್ಸವ ದಿನದಂದೆ ಕಲಬುರಗಿಯಲ್ಲಿ ಮತ್ತೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದೆ. ರಾಜ್ಯೋತ್ಸವದ ಹಿನ್ನಲೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಕೋರ್ಟ್ ರಸ್ತೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸಲಾಯಿತು‌.
ಪ್ರತ್ಯೇಕ ರಾಜ್ಯ ಆಗಲೇಬೇಕು ಎಂದು ಘೋಷಣೆ.!
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನೇರವೇರಿಸಲು ಮುಂದಾದ 20ಹೆಚ್ವು ಜನರನ್ನು ಪೋಲಿಸರು‌ ವಶಕ್ಕೆ ಪಡೆದರು‌. ಈ ವೇಳೆ ಮಾತನಾಡಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಮ್ ಎಸ್ ಪಾಟೀಲ್ ನರಿಬೋಳ ಅವರು, ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ಸರ್ಕಾರಗಳು ಮಲತಾಯಿ ಧೋರಣೆ ತಾಳಲಾಗುತ್ತಿದೆ.
371ಜೆ ಜಾರಿಯಾದರೂ ಸಹ ಈ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಈ ಭಾಗದ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಹ ವಿಳಂಬ ಮಾಡಲಾಗುತ್ತಿದೆ. ಈ ಮಲತಾಯಿ ಧೋರಣೆ ಮುಂದುವರೆದರೆ ಮುಂಬರುವ ದಿನಗಳಲ್ಲಿ ಪ್ರತ್ಯೇಕ ರಾಜ್ಯದ ಹೋರಾಟ ತೀವ್ರಗೊಳಿಸಿ ತೆಲಂಗಾಣದ ಮಾದರಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಯಾವ ಸರ್ಕಾರ ಅಸ್ತಿತ್ವಕ್ಕೆ ಬಂದರು ಸಹ ಕಲ್ಯಾಣ ಕರ್ನಾಟಕ ಭಾಗಕ್ಕೆ ದ್ರೋಹ ಮಾಡಲಾಗುತ್ತಿದೆ. ಇದು ಕಲ್ಯಾಣ ಕರ್ನಾಟಕ ಭಾಗದ ಹೋರಾಟಗಾರರನ್ನು ಕೆರಳುವಂತೆ ಮಾಡಿದೆ. ಸರ್ಕಾರದ ನಡೆಯ ವಿರುದ್ಧ ರಸ್ತೆಗಿಳಿದು ಹೋರಾಟ ಮಾಡುತ್ತಿದ್ದು, ಮಲತಾಯಿ ಧೋರಣೆ ಕೈಬಿಡಿ ಇಲ್ಲವಾದರೆ ನಮಗೆ ಪ್ರತ್ಯೇಕ ರಾಜ್ಯ ಕೊಡಿ ಎಂಬ ಕೂಗು ಕೇಳಿಬರುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಛತ್ತೀಸ್‌ಗಢದಲ್ಲಿ ಎನ್ಕೌಂಟರ್: ಮೂವರು ಮಹಿಳಾ ಮಾವೋವಾದಿಗಳ ಹತ್ಯೆ