Publish Date: Tue, 06 Jun 2023 (17:24 IST)
Updated Date: Tue, 06 Jun 2023 (14:26 IST)
ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದಿದ್ದು ಈ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ ಬಳಿ ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್ನಲ್ಲಿ ಕೆಲಸ ಮಾಡ್ತಿದ್ದ ಪವನ್ಕುಮಾರ್ ಹತ್ಯೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಟೋಲ್ನಿಂದ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಗಳು ಪವನ್ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟಿದ್ದ. ಈ ವೇಳೆ ಪವನ್ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.